26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

ಉಜಿರೆ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಮೇ 08 ರಂದು ಹಮ್ಮಿಕೊಳ್ಳಲಾಯಿತು.


ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಹರಿದಾಸ್ ಉದ್ಘಾಟಿಸಿ ಪ್ರಥಮ ಚಿಕಿತ್ಸೆಯ ಅವಶ್ಯಕತೆಯ ಬಗ್ಗೆ ವಿವರಿಸಿ ಶುಭಹಾರೈಸಿದರು.

ಬಳಿಕ ಮುಖ್ಯ ತರಬೇತುದಾರರಾಗಿ ಆಗಮಿಸಿದ ದ. ಕ. ಯುವ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಸಚೇತ್ ಸುವರ್ಣ ಅವರಿಂದ ತರಬೇತಿ ನಡೆಯಿತು.


ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಘಟಕದ ಕಾರ್ಯದರ್ಶಿ ಯಶವಂತ ಪಟವರ್ಧನ್ ವೈ.ಆರ್.ಸಿ ಕಾರ್ಯಕ್ರಮಾಧಿಕಾರಿ ಅವನೀಶ್.ಪಿ, ಉಪಸ್ಥಿತರಿದ್ದರು. ಜೀವನ್ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಪ್ರಕೃತಿ ಕಾರ್ಯಕ್ರಮ ನಿರ್ವಹಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya
error: Content is protected !!