29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ನಾಳೆ ಮಂಗಳೂರು, ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ನಡೆಯಲಿದೆ. ಮೇ 10ರಂದು ತಾಲೂಕಿನ 241 ಮತದಾನ ಕೇಂದ್ರಗಳಲ್ಲಿ ಚುನಾವಣೆ ನಡೆದ ಬಳಿಕ ಮಂಗಳೂರಿಲ್ಲಿ ರೂಮಿನಲ್ಲಿ ಇವಿಎಂ, ವಿವಿ ಪ್ಯಾಟ್‌ಗಳನ್ನು ಇಡಲಾಗಿದ್ದು, ಕೇಂದ್ರೀಯ ಅರೆಸೇನಾ ಪಡೆ ಭದ್ರತೆ ಒದಗಿಸಿದೆ.


ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಶೇ 82.65 ಮತದಾನವಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 1,13,774 ಪುರುಷರು ಹಾಗೂ 1,15,096 ಮಹಿಳೆಯರು ಸೇರಿದಂತೆ ಒಟ್ಟು 2,28,871 ಮತದಾರರಿದ್ದು, ಇವರಲ್ಲಿ ಮೇ 10ರಂದು ನಡೆದ ಚುನಾವಣೆಯಲ್ಲಿ 92,751 ಪುರುಷರು ಮತ್ತು 93,755 ಮಂದಿ ಸೇರಿದಂತೆ ಒಟ್ಟು 1,86,506 ಮತಚಲಾಯಿಸಿದ್ದಾರೆ. ಶೇ 81.49 ಮತದಾನವಾಗಿದೆ. ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಾಂಗರಿಗೆ ಮನೆಯಿಂದಲೇ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 2654 ಮಂದಿ ಮತ ಚಲಾಯಿಸಿದ್ದಾರೆ. ಇದರಿಂದಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಒಟ್ಟು ಮತದಾನ ಶೇ 82.65 ಆದಂತಾಗಿದೆ.


ಸುರತ್ಕಲ್ ಎನ್‌ಐಟಿಕೆಯಲ್ಲಿ ಮತ ಎಣಿಕೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ಬೆಳಗ್ಗೆ 8 ರಿಂದ ಆರಂಭವಾಗಲಿದೆ. ಅಂಚೆ ಮತಪತ್ರಗಳ ಎಣಿಕೆ ಪ್ರಾರಂಭವಾದ 30 ನಿಮಿಷಗಳ ಬಳಿಕ ಮತ ಗಟ್ಟೆಗಳಲ್ಲಿ ಇವಿಎಂನಲ್ಲಿ ದಾಖಲಾದ ಮತಗಳ ಎಣಿಕೆ ನಡೆಸಲು ಗೊತ್ತು ಪಡಿಸಲಾದ ಮೇಜುಗಳಲ್ಲಿ ನಡೆಯಲಿದೆ. ಮತಗಳ ಎಣಿಕೆ ನಡೆಸುವ ಬಗ್ಗೆ ಅಭ್ಯರ್ಥಿಗಳು ನಿಗದಿಪಡಿಸಿದ ನಮೂನೆ 18ರಲ್ಲಿ 14 ಮತ ಎಣಿಕೆ ಮೇಜಿಗೆ, 5 ಅಂಚೆ ಪತ್ರಗಳ ಎಣಿಕೆ ಮೇಜಿಗೆ ಮತ್ತು 1 ಚುನಾವಣಾಧಿಕಾರಿ ಮೇಜಿಗೆ ಒಟ್ಟು 20 ಮತ ಎಣಿಕೆ ಏಜೆಂಟರನ್ನು ನೇಮಿಸಿಕೊಳ್ಳಲು ಅವಕಾಶ ನೀಡಲಾಗಿದೆ.


ಪ್ರತಿ ವಿಧಾನ ಸಭಾ ಕ್ಷೇತ್ರಗಳಿಗೂ ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ನಡೆಸಲಾಗುತ್ತಿದ್ದು, ಇದಕ್ಕೆ ಬೇಕಾದ ಎಣಿಕೆ ಮೇಜುಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಸುತ್ತಿನ ಎಣಿಕೆ ಪೂರ್ಣಗೊಂಡ ನಂತರ ಇದರ ದಾಖಲೀಕರಣ ನಡೆಯಲಿದೆ. ಬಹುತೇಕ 15 ಸುತ್ತುಗಳು ಪೂರ್ಣಗೊಳ್ಳುವ ಹಂತದಲ್ಲಿ ಯಾರು ವಿಜೇತರು ಎಂದು ಸ್ವಷ್ಟಗೊಳ್ಳಲಿದ್ದು, ಎಣಿಕೆ ಪೂರ್ಣಗೊಂಡ ಬಳಿಕ ಚುನಾವಣಾಧಿಕಾರಿಗಳು ಚುನಾವಣಾ ಆಯೋಗದ ಅನುಮತಿಯನ್ನು ಪಡೆದು ಅಂತಿಮ ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ.

Related posts

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya
error: Content is protected !!