ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು18,216 ಮತಗಳ ಅಂತರದಿಂದ ಹಿಂದಿಕ್ಕಿ ಪ್ರಚಂಡ ಜಯಭೇರಿ ಭಾರಿಸಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಹೋರಾಟದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಹರೀಶ್ ಪೂಂಜ ಅವರು 1,01,004 ಮತಗಳನ್ನು ಪಡೆದುಕೊಂಡು ದ್ವೀತಿಯ ಬಾರಿಗೆ ಶಾಸಕರಾಗಿ ಆಯ್ಕೆಯಾಗುವುದರೊಂದಿಗೆ ಮತ್ತೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರವನ್ನು ಬಿಜೆಪಿ ಪಕ್ಷಕ್ಕೆ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಗೆ ತೀವ್ರ ಪ್ರತಿಸ್ಪರ್ಧೆ ನೀಡಿ ಬಹಳಷ್ಟು ಹೋರಾಟ ನಡೆಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು 82,788 ಮತಗಳನ್ನು ಪಡೆದುಕೊಂಡು ಸೋಲು ಅನುಭವಿಸಿದ್ದಾರೆ.
ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಅಂಚೆ ಮತದಾನದಲ್ಲಿ ಹರೀಶ್ ಪೂಂಜರಿಗೆ ಹೆಚ್ಚು ಮತಗಳು ಬಂದಿದೆ. ಪ್ರತಿ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿಗಿಂತ ಮುನ್ನಡೆಯನ್ನು ಸಾಧಿಸುತ್ತಾ ಬಂದು ಕೊನೆಯ 18 ಸುತ್ತಿನಲ್ಲಿ ಜಯ ಸಾಧಿಸಿದ್ದಾರೆ. ತಾಲೂಕಿನ 241 ಬೂತುಗಳಲ್ಲೂ ಬಿಜೆಪಿ ಅಭ್ಯರ್ಥಿಗೆ ಹೆಚ್ಚು ಮತಗಳು ಬಂದಿದ್ದು, ಓದುಗರಿಗಾಗಿ ‘ಸುದ್ದಿ ಉದಯ’ ಪತ್ರಿಕೆ ಪ್ರತಿ ಬೂತುಗಳಲ್ಲಿ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರವನ್ನು ನೀಡಿದೆ.

Leave a Comment

error: Content is protected !!