24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಐದನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 4971 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 30183 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 25212 ಮತಗಳು
  • ಹರೀಶ್ ಪೂಂಜಾ 4971 ಮತಗಳ ಮುನ್ನಡೆ

Related posts

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya
error: Content is protected !!