25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

ಕಳೆಂಜ: ಇಲ್ಲಿಯ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.


ಇಂದು ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಜನರು ಪಂಚಾಯತು ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳೀಯರು ಹೋಗಿ ಟ್ಯಾಂಕ್‌ನ ಒಳಗೆ ನೋಡಿದಾಗ ಅಪರಿಚಿತ ಗಂಡಸಿನ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು, ಸುಮಾರು ನಾಲ್ಕು ದಿನಗಳ ಹಿಂದೆ ಈತ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.

ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಿಸಲಾಗಿದ್ದು, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!