29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ‌ ಅದ್ಧೂರಿಯಾಗಿ ಆಚರಿಸಲಾಯಿತು.

ಗ್ರಾಮದ ಮೂಲೆ‌ ಮೂಲೆಗಳಿಗೆ ಬೈಕ್ ಮತ್ತು ವಾಹನ ಜಾಥಾ ಮೂಲಕ ಸಂಚರಿಸಿ ಅಲ್ಲಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಲಾಯಿತು. 200 ಕ್ಕೂ ಹೆಚ್ಚು ಕಾರ್ಯಕರ್ತರು , ಶಾಸಕರ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೆ ಅಭಿಮಾನಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತ ರವರ ನಿವಾಸದಲ್ಲಿ ಭೋಜನ ಕೂಟ ಏರ್ಪಡಿಸಲಾಯಿತು

ಕಾರ್ಯಕ್ರಮದ ಉಸ್ತುವಾರಿಯನ್ನು ಸ್ಥಳೀಯ ಬಿಜೆಪಿ ನಾಯಕರಾದ ರಾಧಾಕೃಷ್ಣ ಹೆಗ್ಡೆ ,ರಾಮಚಂದ್ರ ಭಟ್ , ಸಂತೋಷ್ ಪೂಜಾರಿ ಮರ್ದೊಟ್ಟು ವಹಿಸಿದ್ದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!