ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

Updated on:

ಉಜಿರೆ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಳೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ. ಪಾದೆಕಲ್ಲು ವಿಷ್ಣು ಭಟ್   ಅವರು ಆಯ್ಕೆಯಾಗಿದ್ದಾರೆ.

ಕಲಾರಂಗದ ವಾರ್ಷಿಕ  ತಾಳಮದ್ದಲೆ ಸಪ್ತಾಹ ಮೇ 21 ರಿಂದ 27ರ ವರೆಗೆ ನಡೆಯಲಿದ್ದು, ಮೇ 27 ಶನಿವಾರ ಸಂಜೆ 5.00 ಗಂಟೆಗೆ ಶಿರ್ವದ ಮಹಿಳಾ ಸೌಧದಲ್ಲಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

Leave a Comment

error: Content is protected !!