ಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಜಿರೆ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಳೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ. ಪಾದೆಕಲ್ಲು ವಿಷ್ಣು ಭಟ್   ಅವರು ಆಯ್ಕೆಯಾಗಿದ್ದಾರೆ.

ಕಲಾರಂಗದ ವಾರ್ಷಿಕ  ತಾಳಮದ್ದಲೆ ಸಪ್ತಾಹ ಮೇ 21 ರಿಂದ 27ರ ವರೆಗೆ ನಡೆಯಲಿದ್ದು, ಮೇ 27 ಶನಿವಾರ ಸಂಜೆ 5.00 ಗಂಟೆಗೆ ಶಿರ್ವದ ಮಹಿಳಾ ಸೌಧದಲ್ಲಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

Related posts

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya
error: Content is protected !!