25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಸೆನ್ನೆಲ್‌ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.ಆದರೆ ಅವರ ವಾರಸುದಾರರ ಕುರಿತು ಈ ಪರಿಸರದ ಯಾರಿಗೂ ಮಾಹಿತಿ ಇಲ್ಲ. ಶುಕ್ರವಾರ ಸಂಜೆ ಇವರ ಮೃತದೇಹ ದೂರವಾಣಿ ವಿನಿಮಯ ಕೇಂದ್ರದ ಬಳಿ ಪತ್ತೆಯಾಗಿದೆ. ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ಸ್ವಯಂಸೇವಕರಾದ ರವೀಂದ್ರ, ಸುಧೀರ್‌ ಹಾಗೂ ರಾಘವೇಂದ್ರ ಇವರು ತತ್‌ಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

6.65 ಲಕ್ಷ ರೂ. ಹಣ ಪತ್ತೆ
ಪೊಲೀಸರ ಸಮ್ಮುಖದಲ್ಲಿ ಕುಟುಂಬದವರ ಪತ್ತೆಗಾಗಿ ವ್ಯಕ್ತಿಯ ಮೃತದೇಹದ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಪತ್ತೆಯಾಗಿದೆ. ಇದನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ. ವ್ಯಕ್ತಿಯು ಕೂಲಿ ಕೆಲಸ ಮಾಡಿ ಸಂಗ್ರಹಿಸಲಾಗಿದ್ದ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಪತ್ತು ನಿರ್ವಹಣ ಯೋಜನಾಧಿಕಾರಿ ಜೈವಂತ ಪಟಗಾರ್‌ ಉಪಸ್ಥಿತರಿದ್ದು, ತಂಡದ ಸದಸ್ಯರಿಗೆ ನಿರ್ದೇಶನ ನೀಡಿದ್ದರು. ಮೃತ ವ್ಯಕ್ತಿಯ ವಾರಸುದಾರರಿದ್ದಲ್ಲಿ ಬೆಳ್ತಂಗಡಿ ಆರಕ್ಷಕ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ

Related posts

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya
error: Content is protected !!