ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕರ್ನಾಟಕದಲ್ಲಿ ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ ತಡೆಗಳಿಲ್ಲದೆ ನಡೆಯಲಿದೆ.ಇದರ ಜೊತೆಗೆ ಮಹಾರಾಷ್ಟ್ರದ ಎತ್ತಿನ ಗಾಡಿ ಓಟವನ್ನೂ ನ್ಯಾಯಾಲಯ ಸಮ್ಮತಿಸಿದೆ.ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸಂವಿಧಾನಪೀಠ ವಜಾಗೊಳಿಸಿದೆ.

next post