April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ಒಟ್ಟು 587 ಅಂಕಗಳನ್ನು ಪಡೆದಿದ್ದು, ಇದೀಗ ಇಂಗ್ಲೀಷ್ ಭಾಷಾ ವಿಷಯದಲ್ಲಿ 2 ಅಂಕಗಳನ್ನು ಹೆಚ್ಚು ಪಡೆದು ಒಟ್ಟು 589 ಅಂಕಗಳೊಂದಿಗೆ ರಾಜ್ಯಕ್ಕೆ ಏಳನೆಯ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸಂಯುಕ್ತ ಪ್ರಭು ಮೊದಲು 585 ಅಂಕಗಳನ್ನು ಪಡೆದವರು ಇದೀಗ ಇಂಗ್ಲೀಷ್ ಭಾಷಾ ವಿಷಯದಲ್ಲಿ 3 ಅಂಕಗಳನ್ನು ಹೆಚ್ಚು ಪಡೆದು 588 ಅಂಕಗಳ ಮೂಲಕ ತಾಲೂಕಿಗೆ ದ್ವಿತೀಯ,ರಾಜ್ಯಕ್ಕೆ ಎಂಟನೆಯ ಸ್ಥಾನ ಪಡೆದು ಕೊಂಡಿದ್ದಾರೆ. ಇದೀಗ ತಾಲೂಕಿಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನಗಳನ್ನು ಎಕ್ಸೆಲ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಂತಾಗಿದೆ.

ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya
error: Content is protected !!