September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ಸಭೆ ಕರೆದು ನೀರಿನ ಸಮಸ್ಯೆ ನಿವಾರಣೆಗೆ ಇದರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆಗ್ರಹಿಸಿದ್ದಾರೆ.


ಅವರು ಮೇ.20ರಂದು ಬೆಳ್ತಂಗಡಿ ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕೆಲ ಸ್ವಯಂ ಸೇವಾ ಸಂಸ್ಥೆಗಳು ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಿದ್ದಾರೆ. ಕೆಲ ವ್ಯಕ್ತಿಗಳು ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ ತಕ್ಷಣ ಜಿಲ್ಲಾಡಳಿತ ಜಿಲ್ಲೆಯ ಶಾಸಕರುಗಳ ಸಭೆ ಕಡೆದು ಇದನ್ನು ಪರಿಹಾರ ಮಾಡುವ ಪ್ರಯತ್ನಗಳನ್ನು ನಡೆಸಬೇಕು ಎಂದರು.
ಶಾಲಾ ಆರಂಭ ಮುಂದೂಡಿ:
ಸರಕಾರದ ಸುತ್ತೋಲೆ ಪ್ರಕಾರ ಮೇ 29ಕ್ಕೆ ಶಾಲಾ-ಕಾಲೇಜುಗಳು ಪ್ರಾರಂಭಗೊಳ್ಳಬೇಕಗಿದೆ. ಆದರೆ ಹವಾಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಜೂನ್ ಒಂದರ ನಂತರ ಮುಂಗಾರು ಮಳೆ ಆರಂಭಗೊಳ್ಳಲಿದೆ ಎಂದು ಸೂಚನೆ ನೀಡಿದ್ದಾರೆ. ಶಾಲಾ ಕಾಲೇಜು ಆರಂಭವಾದಾಗ ದೂರದ ಊರಿನಿಂದ ಹಾಸ್ಟೇಲ್‌ಗಳಿಗೆ ಮಕ್ಕಳು ಬರಲಿದ್ದು, ಹಾಸ್ಟೇಲ್‌ನಲ್ಲಿ ನೀರಿನ ಸಮಸ್ಯೆ ಇದೆ. ಶಾಲೆಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ನೀರಿನ ಸಮಸ್ಯೆ ಪರಿಹಾರವಾಗುವ ತನಕ ಶಾಲಾ-ಕಾಲೇಜಗಳ ಆರಂಭವನ್ನು ಮುಂದೂಡುವಂತೆ ಅವರು ಒತ್ತಾಯಿಸಿದರು.
ಇದೇ ಮೇ 22 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಶಾಸಕರಾಗಿ ಚುನಾಯಿತರಾದ ಹಿನ್ನಲೆಯಲ್ಲಿ ಅವರಿಗೆ ಗೌರವಾರ್ಪಣೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಭೆ ಕಿನ್ಯಮ್ಮ ಸಭಾ ಭವನದಲ್ಲಿ ನಡೆಯಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಈ ಸಂದರ್ಭ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸಾಧನೆ

Suddi Udaya
error: Content is protected !!