April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ರವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ಸಹಕರಿಸಿ, ಅಹರ್ನಿಶಿ ದುಡಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಮೇ. 22 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರನ್ನು ಅಭಿನಂದಿಸಲಾಯಿತು.ಕಾರ್ಯಕರ್ತರನ್ನು ಅಭಿನಂದಿಸಲಾಯಿತು‌.

ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ, ಕ್ಷೇತ್ರ ಪ್ರಭಾರಿ ಯತೀಶ್ ಆಳ್ವ, ಮಂಡಲ ಕಾರ್ಯದರ್ಶಿಗಳಾದ ಗಣೇಶ್ಗೌಡ, ಶ್ರೀ ನಿವಾಸ ರಾವ್, ನ್ಯಾಯವಾದಿ ಸುಬ್ರಹ್ಮಣ್ಯ ಕುಮಾರ್ ಅಗರ್ತ, ದ.ಕ ಜಿಲ್ಲಾ ಉಪಾಧ್ಯಕ್ಷೆ ಧನಲಕ್ಷ್ಮೀ, ಎಸ್.ಟಿ ಮೋರ್ಚಾದ ಅಧ್ಯಕ್ಷ ಚೆನ್ನಕೇಶವ, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ದ.ಕ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ನ.ಪಂ. ಅಧ್ಯಕ್ಷೆ ರಜನಿ ಕುಡ್ವ, ಕಾಮಿಡಿ ಕಿಲಾಡಿಯ ಅನೀಶ್ ಪೂಜಾರಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಣೇಶ್ ಗೌಡ ವಂದೇ ಮಾತರಂ ಹಾಡಿದರು. ಉಪಾಧ್ಯಕ್ಷ ಸೀತಾರಾಮ ಬಿ.ಎಸ್ ಸಹಕರಿಸಿದರು.

Related posts

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!