37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಜೀವವೈವಿಧ್ಯತೆ ಹಾಗೂ ಪರಿಸರ ನಿರ್ವಹಣೆ ಗೆ ಸಂಬಂಧಿಸಿದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಪೂರಣ್ ವರ್ಮ ಅವರು ಯಶೋವರ್ಮ ಅವರ ನಿಸರ್ಗ ಪ್ರೇಮ, ಸಸ್ಯಜ್ಞಾನ ಹಾಗೂ ಉದ್ಯಾನ ನಿರ್ಮಾಣದ ಕೌಶಲ್ಯಗಳನ್ನು ಉದಾಹರಣೆ ಸಹಿತ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಅವರು , ಯಶೋವರ್ಮ ಅವರ ಬಹುಮುಖಿ ವ್ಯಕ್ತಿತ್ವದ ಮೇಲೆ ಬೆಳಕು ಚೆಲ್ಲಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಅವರು ಯಶೋವರ್ಮ ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸಬಹುದಾದ ನಿಜವಾದ ಗೌರವ ಎಂದರು. ದಾವಣಗೆರೆ ವಿಶ್ವವಿದ್ಯಾಲಯದ ಡಾ . ಶಿಶುಪಾಲ ಮತ್ತು ಬೆಂಗಳೂರಿನ ಶ್ರೀಧರ್ ಶೆಟ್ಟಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವಹಿಸಿದ್ದರು.

Related posts

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!