ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.
ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ರಥೋತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.
ಇಂದು ಸಂಜೆ 7 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟವು ಮುಂಡಾಜೆಯಲ್ಲಿ ಭಾರ್ಗವ ಸಭಾ ಭವನದಲ್ಲಿ ನಡೆಯಲಿದೆ.

ಇದೇ 25 ರಂದು ಹತ್ತನಾವಧಿ ನಿಮಿತ್ತ ಮೇಳದ ಕಲಾವಿದರಿಗೆ ರಜೆ ಇದ್ದು ಇದೇ 26, 27 ಮತ್ತು 28 ರಂದು ಮೂರು ದಿನ ಧರ್ಮಸ್ಥಳದಲ್ಲಿ ಸಂಜೆ ಗಂಟೆ 7 ರಿಂದ ರಾತ್ರಿ 12ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನದ ಬಳಿಕ ಕಲಾವಿದರು ಪ್ರಸಕ್ತ ವರ್ಷದ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು. ಮುಂದೆ, ನವೆಂಬರ್ ಬಳಿಕ ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಪ್ರಾರಂಭಗೊಳ್ಳಲಿದೆ.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ಗೆ ತೆಲಂಗಾಣ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳ ತಂಡ ಭೇಟಿ: ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ

Suddi Udaya

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!