28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ‘ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮದ ಮೂಲಕ ಪ್ರಸ್ತುತ ವರ್ಷ 26200 ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಾವತಿಸಲಾಗುತ್ತಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್. ಮಂಜುನಾಥ್‌ರವರು ತಿಳಿಸಿದರು.
ಸಾಮಾನ್ಯ ಶಿಕ್ಷಣಕ್ಕಿಂತ ಹೆಚ್ಚಿನ ಅವಕಾಶಗಳು ಇಂದು ವೃತ್ತಿ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಇದ್ದು, ಬಡ ಮತ್ತು ಅಸಂಘಟಿತ ವಲಯದ ಜನಸಾಮಾನ್ಯರ ಪ್ರತಿಭಾವಂತ ಮಕ್ಕಳು ಬಡತನ, ಸೂಕ್ತ ಬೆಂಬಲ ಮತ್ತು ಇಂತಹ ಶಿಕ್ಷಣವನ್ನು ನೀಡುವ ಶಿಕ್ಷಣ ಸಂಸ್ಥೆಗಳು ಸ್ಥಳೀಯವಾಗಿ ಲಭ್ಯವಿಲ್ಲದೇ ಇರುವುದರಿಂದ ಈ ಶಿಕ್ಷಣವನ್ನು ಪಡೆಯುವುದೇ ದುಸ್ತರವಾಗಿದೆ. ಈ ಕೊರತೆಯನ್ನು ಗಮನಿಸಿದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ’ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮವನ್ನು ಜಾರಿಗೆ ತಂದರು. ಈ ಕಾರ್ಯಕ್ರಮದಂತೆ ಯೋಜನೆಯ ಸಂಘಗಳ ಬಡ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಶಿಷ್ಯವೇತನ ನೀಡಲಾಗುತ್ತಿದೆ. ಇದರಂತೆ 3 ವರ್ಷದವರೆಗಿನ ಕೋರ್ಸ್‌ಗಳಿಗಾಗಿ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು ತಲಾ ರೂ. 400/-ರಂತೆ ಹಾಗೂ ಅದರಿಂದ ಮೇಲ್ಪಟ್ಟ 5 ವರ್ಷದವರೆಗಿನ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ತಲಾ ರೂ.1000/- ದಂತೆ ಸಂಬಂಧಿಸಿದ ಕೋರ್ಸ್ ಮುಗಿಯುವವರೆಗೆ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಶಿಷ್ಯವೇತನ ಪಾವತಿಸಲಾಗುತ್ತಿದೆ.

Related posts

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya
error: Content is protected !!