September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭವು ಮೇ 24 ರಂದು ಮಹಿಳಾ ಗ್ರಾಹಕರ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು.

ಶಾಖಾ ಕಛೇರಿ ಉದ್ಘಾಟನೆಯನ್ನು ಸುಮನಾ ಪುಷ್ಪರಾಜ್ ಶೆಟ್ಟಿ ಉಜಿರೆ ನೆರವೇರಿಸಿದರು. ವಂದನಾ ರಾಜು ಶೆಟ್ಟಿ ಬೆಂಗತ್ಯಾರು ದೀಪ ಪ್ರಜ್ವಲಿಸಿದರು. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಂ.ಜಿ. ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಗಣಕ ಯಂತ್ರದ ಉದ್ಘಾಟನೆಯನ್ನು ವಸುಧಾ ಪ್ರಶಾಂತ್ ಶೆಟ್ಟಿ ಮೂಡಾಯೂರು ಮಡಂತ್ಯಾರು ನೆರವೇರಿಸಿದರು.


ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಬಿ. ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ ಹೆಚ್, ಜಯಂತ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಬಿ. ನಾರಾಯಣ ಶೆಟ್ಟಿ, ಕೃಷ್ಣ ರೈ ಟಿ., ರಘುರಾಮ ಶೆಟ್ಟಿ ಎ., ಸದಾಶಿವ ಶೆಟ್ಟಿ, ಅಂಬಾ ಬಿ. ಆಳ್ವ, ರಾಜೇಶ್ ಶೆಟ್ಟಿ, ಪುರಂದರ ಶೆಟ್ಟಿ, ಜಯರಾಮ ಭಂಡಾರಿ ಎಂ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಪ್ರಭಾರ ಶಾಖಾ ಪ್ರಬಂಧಕಿ ಅಖಿಲಾ ಆರ್. ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!