September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಭಾರತ್ ಟಾಕೀಸ್ ಬಳಿ ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಬಳಲಿ ನಡೆಯಲು ಸಾಧ್ಯವಾಗದೆ ಬಿದ್ದಿದ್ದು, ಇದನ್ನು ಕಂಡ ನಗರ ಪಂಚಾಯತಿ ಉಪಾಧ್ಯಕ್ಷ ಜಯಾನಂದ ಗೌಡ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಸ್ಥಳೀಯರಾದ ಕರುಣಾಕರ ಸಂಕೇಶ್ ಶೆಟ್ಟಿ. ಜಗನ್ನಾಥ್ ಹಾಗೂ ಸುರೇಶ್ ಪೌರ ಕಾರ್ಮಿಕರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳು ಆ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

Suddi Udaya

ಮಡಿಕೇರಿಯ ಪ್ರಕೃತಿ ಮಡಿಲಲ್ಲಿ ಬೆಳ್ತಂಗಡಿ ಹೆರಾಜೆ ಕುಟುಂಬದ ಸಂಭ್ರಮದ ಕುಟುಂಬ ಮಿಲನ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya
error: Content is protected !!