26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಭಾರತ್ ಟಾಕೀಸ್ ಬಳಿ ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಬಳಲಿ ನಡೆಯಲು ಸಾಧ್ಯವಾಗದೆ ಬಿದ್ದಿದ್ದು, ಇದನ್ನು ಕಂಡ ನಗರ ಪಂಚಾಯತಿ ಉಪಾಧ್ಯಕ್ಷ ಜಯಾನಂದ ಗೌಡ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಸ್ಥಳೀಯರಾದ ಕರುಣಾಕರ ಸಂಕೇಶ್ ಶೆಟ್ಟಿ. ಜಗನ್ನಾಥ್ ಹಾಗೂ ಸುರೇಶ್ ಪೌರ ಕಾರ್ಮಿಕರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳು ಆ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya
error: Content is protected !!