22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

ಉಜಿರೆ: ಸಾಹಿತ್ಯದ ವಿವಿಧ ಆಯಾಮಗಳನ್ನು ಪರಿಚಯಿಸುವಂಥ ಶಿಬಿರಗಳು ಯುವಸಮೂಹದಲ್ಲಿ ಸದಭಿರುಚಿ ನೆಲೆಗೊಳಿಸುವುದರೊಂದಿಗೆ ಭಾಷೆ ಮತ್ತು ಸಂಸ್ಕೃತಿಯ ಕುರಿತ ಕಾಳಜಿಯನ್ನು ವ್ಯಾಪಕಗೊಳಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವಿ.ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.
ಎಸ್.ಡಿ.ಎಂ ಕಾಲೇಜಿನ ಕನ್ನಡ ಸಂಘ ಹಾಗೂ ಹೆಗ್ಗೋಡಿನ ನೀನಾಸಂ ಪ್ರತಿಷ್ಠಾನ ಸಹಯೋಗದೊಂದಿಗೆ 25ನೇ ಸಾಹಿತ್ಯ ಅಧ್ಯಯನ ಶಿಬಿರದ ರಜತ ಸಂಭ್ರಮದ ಪ್ರಯುಕ್ತ ಆಯೋಜಿತವಾದ ಎರಡು ದಿನಗಳ ‘ಕಲಾನುಸಂಧಾನ ಶಿಬಿರ’ವನ್ನು ಮೇ 26 ರಂದು ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯ ಎನ್ನುವುದು ನಮ್ಮ ಭಾವನೆಗಳ ಬೆಳವಣಿಗೆಗೆ ಸಾವಯವ ಇದ್ದಹಾಗೆ. ಕಾವ್ಯ, ಕಥೆ, ಕಾದಂಬರಿಗಳ ವಿಮರ್ಶೆಯು ಸರಿಯಾದ ಅರ್ಥಗಳನ್ನು ಹೊಳೆಸುತ್ತದೆ. ನೀನಾಸಂ ಸಂಸ್ಥೆಯೊಂದಿಗೆ ಎಸ್.ಡಿ.ಎಂ ಕಾಲೇಜು ಆಯೋಜಿಸುವ ಶಿಬಿರವು ವಿದ್ಯಾರ್ಥಿಗಳೊಳಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಜ್ಞೆಯನ್ನು ಮೂಡಿಸಿದೆ. ಈ ಬಗೆಯ ಪ್ರಯತ್ನಗಳು ಮುಂದುವರೆಯಲಿ ಎಂದು ಆಶಿಸಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಕಾಲೇಜಿನ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಬದ್ಧತೆಯ ಬಗ್ಗೆ ಪ್ರಸ್ತಾಪಿಸಿದರು. ಕಳೆದ 25 ವರ್ಷಗಳಿಂದ ನೀನಾಸಂ ಸಂಸ್ಥೆಯ ಒಡಂಬಡಿಕೆಯೊಂದಿಗೆ ಎಸ್.ಡಿಂ.ಎಂ ಶಿಕ್ಷಣ ಸಂಸ್ಥೆಯು ಸಾಹಿತ್ಯ, ಸಂಸ್ಕೃತಿ ಕುರಿತು ಮೌಲಿಕ ಚಿಂತನೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಶಿಬಿರವನ್ನು ನಡೆಸಿಕೊಂಡು ಬಂದಿದೆ ಎಂದರು.
ಎಸ್.ಡಿ.ಎಂ ಕಾಲೇಜಿನ ವಿಶ್ರಾಂತ ಕುಲಸಚಿವರಾದ ಡಾ.ಬಿ.ಪಿ.ಸಂಪತ್ ಕುಮಾರ್ ಅವರು ನೀನಾಸಂ ಸಂಸ್ಥೆಯೊಂದಿಗೆ ಎಸ್.ಡಿ.ಎಂ ಕಾಲೇಜು ಕಳೆದ 24 ವರ್ಷಗಳಿಂದ ಆಯೋಜಿಸುತ್ತಿರುವ ವಾರ್ಷಿಕ ಅಧ್ಯಯನ ಶಿಬಿರದ ಮೌಲಿಕ ಚಿಂತನೆಯ ವಿಶೇಷತೆಗಳನ್ನು ನೆನಪಿಸಿಕೊಂಡರು. ಪ್ರತಿವರ್ಷದ ಶಿಬಿರಗಳ ಮೂಲಕ ಕನ್ನಡದ ಮಹತ್ವದ ಲೇಖಕರ ಕೃತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ವಿದ್ಯಾರ್ಥಿಗಳು ಸಾಹಿತ್ಯ, ಸಂಸ್ಕೃತಿ ಕುರಿತ ಶಿಬಿರಗಳಲ್ಲಿ ಪಾಲ್ಗೊಂಡು ತಮ್ಮ ತಿಳುವಳಿಕೆಯನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಖ್ಯಾತ ಕಥೆಗಾರರಾದ ವಸುಧೇಂದ್ರ ಉಪಸ್ಥಿತರಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೋ.ಟಿ.ಪಿ.ಅಶೋಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬೋಜಮ್ಮ ಕೆ.ಎನ್. ಸ್ವಾಗತಿಸಿದರು.. ಸಹಾಯಕ ಪ್ರಾಧ್ಯಾಪಕರಾದ ಡಾ.ದಿವಾಕರ ಕೆ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ವಂದಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya
error: Content is protected !!