24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ: ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಹಾಗೂ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿ, ಅಭಿಮಾನಿಗಳು ದೇವಸ್ಥಾನದಲ್ಲಿ ಪುತ್ತಿಲರ ಪರವಾಗಿ ಚುನಾವಣಾ ಸಂದರ್ಭದಲ್ಲಿ ರಂಗಪೂಜೆ ಹರಕೆಯನ್ನು ನಡೆಸಿ, ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಂತರ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೇ.28 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.


ಸೌತಡ್ಕ ಶ್ರೀ ಗಣೇಶ್ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಕೆದೀಲಾಯ ವಹಿಸಿದ್ದರು. ವೇದಿಕೆಯಲ್ಲಿ ಕೃಷಿಕ ತುಕ್ರಪ್ಪ ಶೆಟ್ಟಿ ಕೌಕ್ರಾಡಿ, ಕೊಕ್ಕಡ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ ಪುಡ್ಕೆತ್ತೂರು, ಕೊಕ್ಕಡ ಉದ್ಯಮಿ ಶಾಂತಪ್ಪ ಮಡಿವಾಳ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಶಗ್ರಿತ್ತಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗುರುಪ್ರಸಾದ್ ಶಗ್ರಿತ್ತಾಯ ಧನ್ಯವಾದವಿತ್ತರು.

ಸಭೆಯಲ್ಲಿ ಪುತ್ತಿಲ ಅಭಿಮಾನಿಗಳು ಸೇರಿದ್ದರು.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya
error: Content is protected !!