September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾಗಿ ನಂತರ ಪತ್ತೆಯಾದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು ಜೆಪಿ ನಗರದ ಪರೋಸಾ ಅಗರ್ವಾಲ್ ಎಂದು ಹೇಳಲಾಗಿರುವ ಯುವಕ ರಾಣಿಝರಿ ಸಮೀಪದವರೆಗೆ ಬೈಕ್ ನಲ್ಲಿ ಬಂದಿದ್ದು ಇಲ್ಲಿಂದ ಬಂಡಾಜೆ ಫಾಲ್ಸ್ ನ ಬದಿಯಿಂದ ಟ್ರೆಕ್ಕಿಂಗ್ ನಡೆಸಲು ಮುಂದಾಗಿದ್ದಾನೆ. ಆದರೆ ಸಂಜೆಯಾಗುತ್ತಿದ್ದಂತೆ ದಾರಿ ತಪ್ಪಿದ್ದು ಬೆಂಗಳೂರಿನ ಯುವಕನಿಗೆ ಕರೆ ಮಾಡಿ ದಾರಿ ತಪ್ಪಿರುವ ವಿಷಯ ತಿಳಿಸಿ ಆ ಯುವಕ ಚಾರ್ಮಾಡಿಯ ಹನೀಫ್ ರವರಿಗೆ ತಿಳಿಸಿ ಅವರ ತಂಡದ ಜೊತೆ ಹುಡುಕಾಟ ನಡೆಸಿದ್ದಾರೆ. ಆದರೆ ಆತನಿರುವ ಸ್ಥಳ ಪತ್ತೆ ಹಚ್ಚಲು ಕ್ಲಿಷ್ಟ ಪರಿಸ್ಥಿತಿಯಾಗಿತ್ತು. ಇಲ್ಲಿನ ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ಸಿಗದಿರುವುದು, ಸಂಪೂರ್ಣ ಅರಣ್ಯ ಪ್ರದೇಶವಾದ ಕಾರಣ ಹಾಗೂ ಜಾರುವ ಬಂಡೆಗಳು ಇರುವುದರಿಂದ ಈತ ಇರಬಹುದಾದ ನಿಗದಿತ ಸ್ಥಳ ಹುಡುಕಲು ಹರಸಾಹಸ ಪಡಬೇಕಾಯಿತು.


ಬಂಡಾಜೆ ಫಾಲ್ಸ್ ನ ತಳ ಹಾಗೂ ಇತರ ಕೆಲವು ಭಾಗಗಳು ದಕ ಜಿಲ್ಲೆ ವ್ಯಾಪ್ತಿಯಲ್ಲಿದ್ದು ಸ್ಥಳೀಯರಾದ ಸಿನಾನ್ ಚಾರ್ಮಾಡಿ, ಮುಬಾಶಿರ್,ಅಶ್ರಫ್, ಕಾಜೂರಿನ ಸಂಶು, ನಾಸೀರ್ ಕಾಜೂರ್, ಹುಡುಕಾಟ ನಡೆಸಿದ್ದರು.


ಪ್ರದೇಶವು ಸಂಪೂರ್ಣ ಕತ್ತಲ ಪರಿಸರ ಹಾಗೂ ಕಾಡಾನೆ ಸಹಿತ ಇತರ ವನ್ಯಜೀವಿಗಳು ಸಂಚರಿಸುವ ಸ್ಥಳವಾಗಿದ್ದು ಹಲವು ರೀತಿಯ ಅಪಾಯಗಳ ಮಧ್ಯೆ ಹುಡುಕಾಟ ನಡೆಸಲಾಗಿತ್ತು.


ಆಗಾಗ ಮೊಬೈಲ್ ಕರೆಗೆ ಸಿಗುತ್ತಿರುವ ಯುವಕನಿಗೆ ಪೊಲೀಸರು ಮತ್ತು ಅರಣ್ಯ ಇಲಾಖೆ, ಧೈರ್ಯ ತುಂಬಿ,
ಹುಡುಕಾಟ ಮುಂದುವರಿಸಿದ್ದರು. ರಾತ್ರಿ ಚಾರ್ಮಾಡಿ ವ್ಯಾಪ್ತಿಯ ಸ್ಥಳೀಯರಾದ ಸಿನಾನ್ ಚಾರ್ಮಾಡಿ, ಮುಬಾಶಿರ್,ಅಶ್ರಫ್, ಕಾಜೂರಿನ ಸಂಶು, ನಾಸೀರ್ ಕಾಜೂರ್, ಹುಡುಕಾಟ ನಡೆಸಿ ಪತ್ತೆ ಹಚ್ಚಿದ್ದಾರೆ.

Related posts

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya
error: Content is protected !!