ಬೆಳ್ತಂಗಡಿ : ಕರ್ನಾಟಕ ಸರಕಾರ ಕಾರ್ಮಿಕ ಇಲಾಖೆ ಹಾಗು ಸ್ಪಂದನ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ ಜಿಲ್ಲಾ ಸಮಿತಿ , ವಕೀಲರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಮಹತ್ವ ಕಾನೂನು ಅರಿವು ಕಾರ್ಯಕ್ರಮ ಮತ್ತು ಗುರುತು ಚೀಟಿ ವಿತರಣೆ ನಡೆಯಿತು.
ಬೆಳ್ತಂಗಡಿ ಜೆ.ಎಂ.ಎಫ್ ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್ ಕಾರ್ಯಕ್ರಮ ಉದ್ಘಾಟಸಿ ಮಾತನಾಡುತ್ತಾ ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕಾರ್ಮಿಕರು ತಮಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು.
ಬೆಳ್ತಂಗಡಿ ವೃತ್ತ ಕಾರ್ಮಿಕ ನಿರೀಕ್ಷಕ ಎಸ್‌ಎನ್ ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಎಸ್ ಅವರು ಕಾರ್ಮಿಕರಿಗೆ ಕಾನೂನು ಅರಿವು ಮಾಹಿತಿ ನೀಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಠೋಸರ್, ಸಹಾಯಕ ಸರಕಾರಿ ಅಭಿಯೋಜಕ ಆಶಿತಾ, ಸಲಹೆಗಾರ ರಾಘವೇಂದ್ರ ಆರ್ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಕೀಲರಾದ ಶಿವಕುಮಾರ್ ಎಂ.ಎಸ್, ವಿವಿಧ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಮಿಕರ ವಿವಿಧ ಸಮಸ್ಯೆಗಳ ಬಗ್ಗೆ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಿಗೆ ಮನವಿ ನೀಡಲಾಯಿತು, ಕಾರ್ಮಿಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.
ಕಾರ್ಮಿಕ ಸಂಘದ ಅಧ್ಯಕ್ಷ ವಸಂತ ನಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು