24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

ಮೈರೋಳ್ತಡ್ಕ : ಬಂದಾರು ಗ್ರಾಮದ‌ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಮೇ 31 ರಂದು ಆಚರಿಸಲಾಯಿತು.
ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಬಂದಾರು ಗ್ರಾ.ಪಂ ಸದಸ್ಯರಾದ ಶ್ರೀಮತಿ ‌ಸುಚಿತ್ರಾ ಮುರ್ತಾಜೆ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಹರೀಣಾಕ್ಷಿ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ ಕೆ ಉಪಸ್ಥಿತರಿದ್ದರು.
ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಪುಷ್ಪಗುಚ್ಚ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಬರವಣಿಗೆ ಪುಸ್ತಕ, ಓದುವ ಪುಸ್ತಕ‌ ಹಾಗೂ ಸಮವಸ್ತ್ರ ವಿತರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದು ಆಕರ್ಷಣಿಯವಾಗಿತ್ತು.

ಎಸ್.ಡಿ.ಎಂ.ಸಿ ಸದಸ್ಯರು ,ಪೋಷಕರು,ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮುಖ್ಯೋಪಾಧ್ಯಾಯರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶಿಕ್ಷಕ ಶ್ರೀಧರ್ ವಂದಿಸಿದರು, ಹಾಗೂ ಶಿಕ್ಷಕ ಮಾಧವ ಗೌಡ ಕಾರ್ಯಕ್ರಮ‌‌ ನಿರೂಪಿಸಿದರು.

Related posts

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!