25.4 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಎಸ್. ಸುಭಾಶ್ಚಂದ್ರ ವಿಧಿವಶ

ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Related posts

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಸಂಜೀವ ಗೌಡ ಕಲ್ಲೇರಿಮಾರುನಿಧನ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!