ಬೆಳ್ತಂಗಡಿ: ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮೇ 31 ರಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಎಸ್ .ಡಿ .ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಮುಖ್ಯ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿಯವರು ” ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವಿವಿಧ ರೀತಿಯ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂಬ ಸದುದ್ದೇಶದಿಂದ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ತರಬೇತಿ, ಕ್ರೀಡಾ ತರಬೇತಿ, ಚಿತ್ರಕಲಾ ತರಬೇತಿಯ ಜೊತೆಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ಶಾಲೆಯಲ್ಲಿ ದೊರಕುವ ಈ ಎಲ್ಲಾ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ನಿಶ್ಚಿತವಾದ ಗುರಿಯನ್ನು ಹೊಂದಿ ಗುರಿಯ ಕಡೆಗೆ ಸಾಗಬೇಕು. ಹೆತ್ತವರನ್ನು ಗುರಿ ಹಿರಿಯರನ್ನು ಗೌರವಿಸಿ, ದೇಶದ ಸತ್ಪ್ರಜೆಯಾಗಿ ಬದುಕು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಮತ್ತೋರ್ವ ಮುಖ್ಯ ಅತಿಥಿ ಕೃಷ್ಣಮಯ್ಯರವರು ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷ ಹೊಸ ಹರುಷವನ್ನು ತರಲಿ ಎಂದು ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಹೇಮಲತಾ ಎಂ ಆರ್ ರವರು ವಹಿಸಿದ್ದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಮುರಳಿ .ಪಿ ಅವರು ನಿರೂಪಿಸಿದರು.