September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಅವರು ಮಾತನಾಡುತ್ತಾ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತದೆ’ ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಹೆಚ್.ಆರ್. ಮ್ಯಾನೇಜರ್ ಶ್ರೀ ಕೃಷ್ಣ ಮಯ್ಯರು ಮಾತನಾಡುತ್ತಾ ‘ಕನ್ನಡ ಮಾಧ್ಯಮ ಎಂಬ ಕೀಳರಿಮೆ ನಿಮಗೆ ಬೇಡ’ ಎಂದು ಪೋಷಕರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ವಹಿಸಿದ್ದರು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಜಿ ಗೌಡ, ಅಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ, ಅಬೂಬಕ್ಕರ್ ಉಪಾಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಶೀಲಾವತಿ ಸದಸ್ಯರು, ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಗೀತಾ ಹಿರಿಯ ಶಿಕ್ಷಕಿ ಮಕ್ಕಳಿಗೆ ಶುಭ ಹಾರೈಸಿದರು.

ಶ್ರೀಮತಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕ ಕೂಸಪ್ಪಗೌಡ ವಂದಿಸಿದರು. ಆಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸ್ಮಾರ್ಟ್ ಬೋರ್ಡ್ ಕೊಡುಗೆ

Suddi Udaya
error: Content is protected !!