29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

ಉಜಿರೆ : ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕ ಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹೇಳಿದರು.
ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಆಶ್ರಯದಲ್ಲಿ ಜೂ 3 ರಂದು ಆಯೋಜಿಸಿದ್ದ ‘ಸಂಶೋಧನಾ ವಿನ್ಯಾಸ: ಲೇಖನ ಬರವಣಿಗೆ ಮತ್ತು ಪ್ರಕಟಣೆ- ಭವಿಷ್ಯದ ಹಾದಿ’ ಎಂಬ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಂಶೋಧನೆಯೆಂಬುದು ಉನ್ನತ ಶಿಕ್ಷಣ ಹಂತದ ಒಂದು ಪ್ರಮುಖ ಅಂಶ. ಇದು ಒಂದು ಹೊಸ ವಿಷಯದ ಉಗಮಕ್ಕೆ ಕಾರಣವಾಗುತ್ತದೆ. ಕಲಿಕೆಗೆ ಕೊನೆಯೆಂಬುದು ಇಲ್ಲ. ಅದು ನಿರಂತರ ಪ್ರಕ್ರಿಯೆ. ಒಬ್ಬ ವ್ಯಕ್ತಿಗೆ ಯಾವುದೇ ಕಟ್ಟುಪಾಡುಗಳಿಲ್ಲದೆ ಅಭಿಪ್ರಾಯಗಳನ್ನು ಮತ್ತು ಸತ್ಯಗಳನ್ನು ವ್ಯಕ್ತಪಡಿಸಲು ಸಂಶೋಧನೆಯು ಅನುವು ಮಾಡಿಕೊಡುತ್ತದೆ. ಸಮಾಜದಲ್ಲಿರುವ ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಶೋಧನೆಗಳ ಪಾತ್ರ ದೊಡ್ಡದು ಎಂದು ಅವರು ತಿಳಿಸಿದರು.


ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ. ಅನಿತಾ ರವಿಶಂಕರ್ ಮಾತನಾಡಿದರು. ಸಂಶೋಧನೆಗಳಲ್ಲಿ ಸಮಸ್ಯೆಗಳನ್ನು ವಿಮರ್ಶಾತ್ಮಕವಾಗಿ ನೋಡಬೇಕು. ಒಂದು ಉತ್ತಮವಾದ ಸಂಶೋಧನೆ ಮೂಡಿಬರಲು ಓದುವಿಕೆಯ ಪಾತ್ರ ಬಹಳ ಮಹತ್ತರ ಎಂದು ಅಭಿಪ್ರಾಯಪಟ್ಟರು.


ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ವಿದ್ಯಾರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ನವೀಕೃತವಾಗಿರಲು ಸಂಶೋಧನೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ. ಸಂಶೋಧನೆಗೆ ಆಯ್ಕೆ ಮಾಡಿಕೊಳ್ಳುವ ವಿಷಯಗಳು ಸಾಮಾಜಿಕ ಸುಸ್ಥಿರತೆ ಮತ್ತು ಅಭಿವೃದ್ಧಿಗೆ ಪೂರಕವಾಗಿದ್ದಾಗ ಅದು ಉತ್ತಮ ಸಂಶೋಧನಾ ಕೃತಿಯಾಗಿ ಮೂಡಿಬರಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ., ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ್ ಪಿ. ಉಪಸ್ಥಿತರಿದ್ದರು.
ಎಸ್.ಡಿ.ಎಂ. ಕಾಲೇಜಿನ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ನಿರ್ದೇಶಕಿ, ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೌಮ್ಯ ಬಿ.ಪಿ. ಸ್ವಾಗತಿಸಿದರು. ಸಂಚಾಲಕ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗಣರಾಜ್ ಕೆ. ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ನೆಫಿಸತ್ ಪಿ. ಕಾರ್ಯಕ್ರಮ ನಿರೂಪಿಸಿದರು.

Related posts

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!