ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಪಣಕಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನಾ ಕಛೇರಿಯ ಮಡಂತ್ಯಾರು ವಲಯದ ಪಣಕಜೆ ಕಾರ್ಯಕ್ಷೇತ್ರದ ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆಯು ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಬೇಬಿ ರವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಪಡ0ಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ಪ್ರಿಯರವರು ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಬಿಪಿ ಹಾಗೂ ಶುಗರ್ ಬರಲು ಕಾರಣ ಹಾಗೂ ಪರಿಹಾರದ ಬಗ್ಗೆ, ಹಾಗೂ ಇನ್ನು ಮುಂದಕ್ಕೆ ಮಳೆಗಾಲ ಪ್ರಾರಂಭ ವಾಗುದರಿಂದ ಸುತ್ತಮುತ್ತಲಿನ ವಾತಾವರಣ ವನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳುವುದರ ಬಗ್ಗೆ, ನೀರು ನಿಲ್ಲದಂತೆ ನೋಡಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ತಪಾಸಣೆಗೆ ಆಶಾ ಕಾರ್ಯಕರ್ತರಾದ ಶ್ರೀಮತಿ ಜ್ಯೋತಿ, ಹಾಗೂ ಪ್ರೇಮ ಸಹಕರಿಸಿದರು. ಈ ಕಾರ್ಯಕ್ರಮ ದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಹರಿಣಿ. ಎಂ , ಪನಕಜೆ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪವತಿ ಯವರು ಉಪಸ್ಥಿತರಿದ್ದರು

Leave a Comment

error: Content is protected !!