23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ” ಶ್ರೀ ಮಂಜುನಾಥ ದಳದ” ಕಬ್, ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು 50 ಬೀಜದ ಉಂಡೆ ಯನ್ನು ತಯಾರಿಸಿದರು. ಕಾಡು ಉಳಿಸಿ ನಾಡು ಬೆಳೆಸಿ ಎಂಬ ಘೋಷಣೆಗಳೊಂದಿಗೆ ಜಾಥದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ಟೀಮ್ ಲೀಡರ್ ಗೈಡ್ ವಿದ್ಯಾರ್ಥಿ ಕುಮಾರಿ ಸಿಂಚನ , ಹಾಗೂ ಸ್ಕೌಟ್ ಟೀಮ್ ಲೀಡರ್ ಮಾಸ್ಟರ್ ಜೈದೀಪ್ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಸ್ಕೌಟ್ಸ್ ಗೈಡ್ ನ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya
error: Content is protected !!