April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ” ಶ್ರೀ ಮಂಜುನಾಥ ದಳದ” ಕಬ್, ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು 50 ಬೀಜದ ಉಂಡೆ ಯನ್ನು ತಯಾರಿಸಿದರು. ಕಾಡು ಉಳಿಸಿ ನಾಡು ಬೆಳೆಸಿ ಎಂಬ ಘೋಷಣೆಗಳೊಂದಿಗೆ ಜಾಥದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ಟೀಮ್ ಲೀಡರ್ ಗೈಡ್ ವಿದ್ಯಾರ್ಥಿ ಕುಮಾರಿ ಸಿಂಚನ , ಹಾಗೂ ಸ್ಕೌಟ್ ಟೀಮ್ ಲೀಡರ್ ಮಾಸ್ಟರ್ ಜೈದೀಪ್ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಸ್ಕೌಟ್ಸ್ ಗೈಡ್ ನ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!