ಅರಸಿನಮಕ್ಕಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಮಂಗಳೂರು ದ.ಕ. ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು-ಉಡುಪಿ-ಸುಳ್ಯ ಹತ್ಯಡ್ಕ ಪ್ರಾ.ಕೃ.ಸ.ಸಂಘ ಅರಸಿನಮಕ್ಕಿ, ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘ ಅರಸಿನಮಕ್ಕಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹತ್ಯಡ್ಕ ಕೊಕ್ಕಡ ವಲಯ, ಕಪಿಲ ಕೇಸರಿ ಯುವಕ ಮಂಡಲ ಕುಂಟಾಲಪಲಿಕೆ, ಶಿವಾನಿ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಅರಸಿನಮಕ್ಕಿ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗ್ರಾ.ಪಂ. ಅರಸಿನಮಕ್ಕಿ, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವನಗರ ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮ ಯೋಜನೆಯಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜೂ.4 ರಂದು ಅರಸಿನಮಕ್ಕಿ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಉಡುಪಿ/ಮಂಗಳೂರು/ಸುಳ್ಯ ಪ್ರಸಾದ್ ನೇತ್ರಾಲಯದ ಡಾ| ಕೃಷ್ಣಪ್ರಸಾದ್, ಹತ್ಯಡ್ಕ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರಕಾಶ್ ಬಿ., ವಿವಿಧ ಸಂಘಟನೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಅಧಿಕಾರಿ ವರ್ಗ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಜನರು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.