24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ, ಬೆಳ್ತಂಗಡಿ, ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಾಗೂ ವಿಶ್ವ ಪರಿಸರ ದಿನವನ್ನು ಜೂ.5 ರಂದು ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಆವರಣದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ದೇವರಾಜು ಹೆಚ್. ಎಂ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಲಯ ಅರಣ್ಯಾಧಿಕಾರಿ ತ್ಯಾಗರಾಜ್‌ ಹೆಚ್ ಎಸ್‌ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರು ಚಿದಾನಂದ ಪಿ ವಿಶ್ವ ಪರಿಸರ ದಿನಾಚರಣೆ ಬಗ್ಗೆ ಮಾಹಿತಿಯನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್‌ ನ್ಯಾಯಾಧೀಶ ಸಂದೇಶ ಕೆ., ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ವಿಜಯೇಂದ್ರ ಟಿ ಹೆಚ್, ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಠೋಸರ್, ಸಹಾಯಕ ಸರ್ಕಾರಿ ಅಭಿಯೋಜಕ ದಿವ್ಯರಾಜ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya
error: Content is protected !!