25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪೋಷಣೆ ಅತಿ ಮುಖ್ಯ. ಈ ಮೂಲಕ ಪ್ರತಿದಿನ ಪರಿಸರ ಕಾಳಜಿ ಅಗತ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಸ್ವಯಂ ಸೇವಕರಿಂದ ಸಸಿಗಳನ್ನು ನೆಡುವ ಕಾರ್ಯ ಜರುಗಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!