24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೆಡಿ-ನಿಟ್ಟೆಡೆ ಸಂಘಟನೆ ವತಿಯಿಂದ ಹಾಗೂ ಸಂಘದ ಗೌರವ ಅಧ್ಯಕ್ಷರಾದ ಅಮ್ಮಾಜಿ ಕೋಟ್ಯಾನ್ ಹಿರ್ತೊಟ್ಟು ಇವರ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕರು ಜಯ ಪೂಜಾರಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕೆಲಸ ಕಾರ್ಯಗಳು ಸಮಾಜಕ್ಕೆ ಮಾದರಿ ಇನ್ನಷ್ಟು ಸಾಮಾಜಿಕ ಸೇವಾ ಕಾರ್ಯಗಳು ಈ ಸಂಘಟನೆಯಿಂದ ನಡೆಯಲಿ ಎಂದು ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ರತ್ನಾಕರ ಸಾಲ್ಯಾನ್ ಬರ್ಕಜೆ ಮಾತನಾಡಿ ನಾರಾಯಣ ಗುರುಗಳ ತತ್ವ, ಸಿದ್ದಾಂತ ಆದರ್ಶಗಳನ್ನು ಮೈಗೂಡಿಸಿಕೊಂಡು ಯಾವುದೇ ಮಕ್ಕಳು ಶಿಕ್ಷಣದಲ್ಲಿ ವಂಚಿತರಾಗದೇ ಉನ್ನತ ಶಿಕ್ಷಣ ಪಡೆದು ಸ್ವತಂತ್ರರಾಗಿ ಸಮಾಜದಲ್ಲಿ ಬದುಕುವಂತರಾಗಬೇಕು. ಸಮಾಜ ಗುರುತಿಸುವಂತ ಕೆಲಸ ಕಾರ್ಯಗಳನ್ನು ನಡೆಸಲು ಎಲ್ಲರೂ ಜೊತೆಯಾಗಿ ಕೆಲಸ ಮಾಡುವುದರ ಮುಖಾಂತರ ಮಾದರಿ ಸಂಘಟನೆ ಎಂಬ ಕೀರ್ತಿಗೆ ಪಾತ್ರರಾಗಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು‌

ಸ್ಥಾಪಕ ಅಧ್ಯಕ್ಷ ಸತೀಶ್ ಕೆರಿಯರ್ ಮಾತನಾಡಿ ಯಾವುದೇ ಟೀಕೆ ಟಿಪ್ಪಣಿಗಳಿಗೆ ಕಿವಿ ಕೊಡದೆ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ ಸ್ಥಾನಮಾನ ಗಳಿಸಿ ಕೀರ್ತಿವಂತರಾಗಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಯಶಲತಾ ಅಮ್ಮಾಜಿ ಉಪಸ್ಥಿತರಿದ್ದರು.

ಅನನ್ಯ ಎ. ಪೂಜಾರಿ ಇವರ ಭಕ್ತಿ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಅಮ್ಮಾಜಿ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನವೀನ್ ಬುಲೆಕ್ಕರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರವಿ ಉಲ್ತುರ್ ವಂದಿಸಿದರು.

Related posts

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya
error: Content is protected !!