28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ತೆಕ್ಕಾರು ಗ್ರಾ.ಪಂ ಪಿಡಿಒ ಸುಮಯ್ಯಾ ಹಾಗೂ ಗ್ರಾ.ಪಂ ಸ್ವಚ್ಚತಾಗಾರ್ತಿ ಪ್ರಮೀಳಾ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಶೀಘ್ರದಲ್ಲಿ ಬಂಧನ ಮಾಡಬೇಕು ಎಂದು ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಅಧ್ಯಕ್ಷರಾದ ನಝೀರ್ ಬಾಜಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ ಸದಸ್ಯೆ ಯಮುನಾ, ಅವರ ಪುತ್ರ ನವೀನ್ ನಾಯ್ಕ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ ಸಾಲಿಯಾನ್ ಎಂಬವರೇ ಕೃತ್ಯವೆಸಗಿದವರೆಂದು ಎಫ್ ಐ ಆರ್ ನಲ್ಲಿ ಉಲ್ಲೇಖವಾಗಿದೆ ಅವರನ್ನು ಶೀಘ್ರದಲ್ಲಿ ಬಂಧನ ಮಾಡಬೇಕು ಮತ್ತು ಒತ್ತುವರಿಯದ ಸರ್ಕಾರಿ ಕಟ್ಟಡವನ್ನು ಮರಳಿ ಪಂಚಾಯತ್ ಗೆ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 109, 504, 323, 506, 354, 353, 392, 34, 2(A) ಮೊದಲಾದ ದಂಡ ಸಂಹಿತೆಯಂತೆ ಕ್ರಿಮಿನಲ್ ಕೃತ್ಯ, ನಿಂದನೆ, ಮಾನಭಂಗ ಯತ್ನ, ಸರಕಾರಿ ಕರ್ತವ್ಯಕ್ಕೆ ಅಡ್ಡಿ, ದರೋಡೆ, ಸರಕಾರಿ ಸೊತ್ತು ನಾಶ, ಇತ್ಯಾಧಿಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧನ ಮಾಡಬೇಕು ಇಲ್ಲವಾದಲ್ಲಿ ತೆಕ್ಕಾರು ಗ್ರಾಮಸ್ಥರನ್ನು ಸೇರಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುದು ಎಂದು ತಿಳಿಸಿದ್ದಾರೆ.

Related posts

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya
error: Content is protected !!