25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ” ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್, ಕಾರ್ಯದರ್ಶಿಯಾದ ಸೈಯದ್ ಅಯ್ಯುಬ್, ಕೋಶಾಧಿಕಾರಿ ಸೈಯದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್, ಅರೇಬಿಕ್ ಶಿಕ್ಷಣ ವಿಭಾಗದ ಗುರುಗಳು ಉಪಸ್ಥಿತರಿದ್ದರು.

ಅತಿಥಿಗಳು ಗಿಡವನ್ನು ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಬೀಜವೊಂದು ಮೊಳಕೆಯೊಡೆದು ಗಿಡವಾಗಿ ಹೂ ಬಿಡುವವರೆಗಿನ ಪ್ರಕ್ರಿಯೆಯನ್ನು ವಿವರವಾಗಿ ತಿಳಿಸಿಕೊಟ್ಟರು. ನಂತರ ಶಾಲಾ ಆವರಣದಲ್ಲಿ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಗಿಡಗಳನ್ನು ನೆಡುವುದರ ಮೂಲಕ ಅವುಗಳಿಗೆ ನೀರುಣಿಸಿ ಸಂರಕ್ಷಣೆ ಮಾಡುವ ಪ್ರತಿಜ್ಞೆಯನ್ನು ಕೈಗೊಂಡರು.

ಶಾಲಾ ಸಹ ಶಿಕ್ಷಕಿ ಶ್ರೀಮತಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!