28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೇಕೋಟೆ, ಬೆಳ್ತಂಗಡಿ ಇಲ್ಲಿ ಆಚರಿಸಲಾಯಿತು.

ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಆಂಗ್ಲ ಭಾಷಾ ಶಿಕ್ಷಕಿಯಾಗಿರುವ ಶ್ರೀಮತಿ ಮೋಹನಂಗಿ ತಿಳಿಸಿದರು.

ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಆಮ್ಲ ಜನಕ ಪೂರೈಸುವ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷೀ ನಾರಾಯಣ ಕೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಹಾಸಿನಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಕಾರ್ಯದರ್ಶಿ ಸುಧೀರ್ ಕೆ. ಎನ್ ಧನ್ಯವಾದವಿತ್ತರು.

ವಾಣಿ ಶಾಲೆಯ ಪ್ರಾರ್ಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬಂದಾರು : ಟೈಲರ್ ರಾಘವ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!