24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

ಉಜಿರೆ: ಸುರತ್ಕಲ್‌ನ ಶ್ರೀ ಎಂ. ಶಂಕರ ನಾರಾಯಣ ಚಾರಿಟೇಬಲ್ ಟ್ರಸ್ಟ್ ಮತ್ತು ಬುದ್ಧ ಸಿಇಒ ವತಿಯಿಂದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ ಜೂ 6 ರಂದು ಸಿರಿ ಕೇಂದ್ರ ಕಛೇರಿಯಲ್ಲಿ ನಡೆಯಿತು.


ಶ್ರೀ ಎಂ. ಶಂಕರ ನಾರಾಯಣ ಚಾರಿಟೇಬಲ್ ಟ್ರಸ್ಟ್‌ನ ರಾಕೇಶ್ ಜಾಲುಮನೆ ಮತ್ತು ಚಂದ್ರರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸರಳ ಧ್ಯಾನದ ವಿಧಾನ, ಧ್ಯಾನದಿಂದ ಮನಸ್ಸಿನ ಮೇಲೆ ಪ್ರಭಾವ ಬೀರುವ ಮತ್ತು ಉಸಿರಿನ ಮೇಲೆ ನಿಯಂತ್ರಣ ಸಾಧಿಸುವ ಮೂಲಕ ಧ್ಯಾನದಿಂದ ದಿನನಿತ್ಯದ ಬದುಕಿನಲ್ಲಿ ಆಗುವ ಉಪಯೋಗಗಳ ಬಗ್ಗೆ ಹಾಗೂ ಸರಿಯಾದ ನಿದ್ರೆ, ಉತ್ತಮ ಆಹಾರ ಪದ್ಧತಿ, ವಿವೇಕಯುಕ್ತ ಮಾತು, ಸಕಾರಾತ್ಮಕ ಯೋಚನೆಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಪ್ರತಿಯೊಬ್ಬ ಮನುಷ್ಯನೂ ಆರೋಗ್ಯಕರವಾಗಿ ಜೀವಿಸಲು ಸಾಧ್ಯ ಎಂದು ಸಿರಿ ಸಿಬ್ಬಂದಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ಧ್ಯಾನ ತರಬೇತಿ ಪಡೆದ ಸಿರಿ ಸಿಬ್ಬಂದಿಗಳು ಧ್ಯಾನವನ್ನು ಮಾಡಿದಾಗ ತಮ್ಮ ದೇಹ ಹಾಗೂ ಮನಸ್ಸಿನಲ್ಲಾದ ಅನುಭವಗಳ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ತಮ್ಮ ದೈನಂದಿನ ಜೀವನದಲ್ಲಿ ಧ್ಯಾನವನ್ನು ಅಳವಡಿಸಿಕೊಂಡು ಉತ್ತಮ ಜೀವನವನ್ನು ನಡೆಸುವುದಾಗಿ ತಿಳಿಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಗೆ ಆಗಮಿಸಿ ಸಿರಿ ಸಿಬ್ಬಂದಿಗಳಿಗೆ ಧ್ಯಾನದ ಮಹತ್ವವನ್ನು ತಿಳಿಸಿದ ಗಣ್ಯರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಧ್ಯಾನದ ಬಗ್ಗೆ ಮಾಹಿತಿ ಪಡೆದುಕೊಂಡರು. ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!