39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!