ಬೆಳ್ತಂಗಡಿ: ತಾಲೂಕು ಕೇಂದ್ರದಿಂದ ಸುಮಾರು 18 ಕಿ ಮಿ ದೂರದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಂಜೆ ಎಂಬ ಗ್ರಾಮೀಣ ಪ್ರದೇಶದಲ್ಲಿ,ಸುತ್ತಲಿನ ಹಲವಾರು ಗ್ರಾಮದ ಜನರಿಗೆ ಉತ್ಕೃಷ್ಟ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಶ್ರೀ ಕೃಷ್ಣ ಆಸ್ಪತ್ರೆಯು ಇಂದು ಹಲವಾರು ವಿಶೇಷ ಸೌಲಭ್ಯಗಳನ್ನು,ನುರಿತ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡು, ಆರೋಗ್ಯ ಸೇವೆ ಒದಗಿಸುತ್ತಿದ್ದು, ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯರು ವೈದ್ಯಕೀಯ ಕ್ಷೇತ್ರದ ಸವಾಲುಗಳ ನಡುವೆ,ಸುಮಾರು ಎಂಟು ವರ್ಷಗಳ ಹಿಂದೆ “ಶ್ರೀ ಕೃಷ್ಣ ಯೋಗಕ್ಷೇಮ” – ನಿಮ್ಮ ಮನೆಬಾಗಿಲಿಗೆ ವೈದ್ಯಕೀಯ ಸೇವೆ, ಎಂಬ ವಿನೂತನ ಯೋಜನೆಯನ್ನು ರೂಪಿಸಿ ಗ್ರಾಮೀಣ ಗುಡ್ಡಗಾಡು ಪ್ರದೇಶದ ಜನರಿಗೆ ಆಸ್ಪತ್ರೆಗೆ ಹೊಗುವುದು ಅಸಾಧ್ಯವಾದ, ಹಾಸಿಗೆ ಹಿಡಿದಂತ ರೋಗಿಗಳಿಗೆ ಅವರ ಮನೆಬಾಗಿಲಿಗೆ ಹೋಗಿ ಚಿಕಿತ್ಸೆ ನೀಡವುದಾಗಿದೆ.,ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಹಾಗೂ ಬಣಕಲ್ ನಲ್ಲಿ ಆಸ್ಪತ್ರೆಯನ್ನು ಸ್ಥಾಪಿಸಿ ಆರೋಗ್ಯ ಸೇವೆ ನೀಡುತ್ತಿದ್ದಾರೆ.
ಇವರ ಈ ವೈದ್ಯಕೀಯ ಕ್ಷೇತ್ರದ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.