ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ 9 ರಂದು ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ.

ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜಾ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ’24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ’ ಎಂದು ಕಿಡಿ ಕಾರಿದ್ದರು.

Leave a Comment

error: Content is protected !!