22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮ ಸಮಸ್ತ ಧಾರ್ಮಿಕ ವಿಧ್ಯಾರ್ಥಿ ಸಂಘಟನೆಯಾದ ಎಸ್.ಕೆ.ಎಸ್.ಎಸ್.ಎಫ್ ಬೊಳ್ಮಿನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಕೆಮ್ಮಟೆ ಶಾಲೆಯಲ್ಲಿ ಎಸ್.ಕೆ.ಎಸ್.ಎಸ್.ಎಫ್ ಬೊಳ್ಮಿನಾರ್ ಶಾಖೆ ಅಧ್ಯಕ್ಷರು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬೂಬಕರ್ ಕುಂಟ್ಯಾನ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್.ಕೆ.ಎಸ್.ಎಸ್.ಎಫ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ನಝೀರ್ ಅಝ್ಹರಿಯವರು ಸಂಘಟನೆಯ ಧ್ಯೇಯ ಉದ್ದೇಶಗಳು ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಪುದುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ರಾಮೇಂದ್ರನ್ ಮೇರ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಂಘಟನೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಮುಖ್ಯ ಶಿಕ್ಷಕಿಯವರಾದ ಶಿಲ್ಪಾ ಟೀಚರ್ ವಿದ್ಯಾರ್ಥಿಗಳಿಗಾಗಿ ಉಚಿತ ಪುಸ್ತಕ ವಿತರಿಸಿದ ಕಾರ್ಯವನ್ನು ಶ್ಲಾಘಿಸುತ್ತಾ ಸಂಘಟಕರಿಗೆ ಸ್ವಾಗತಿಸಿ ಅಭಿನಂದಿಸಿದರು.

ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಫೂರ್ ಬೊಳ್ಮನಾರ್, ಮಾಜಿ ಉಪಾಧ್ಯಕ್ಷರಾದ ಬೊಮ್ಮಣ್ಣ ಗೌಡ, ಸಮಾಜ ಸೇವಕರಾದ ಶಶಿ ಕರಂಬಾರು ಸಂಘಟನೆ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕ್ಕಳ, ಹಳೇ ವಿದ್ಯಾರ್ಥಿ ಸಂಘದ ಸದಸ್ಯರಾದ ಬಾಲಕೃಷ್ಣ, ಊರಿನ ಹಿರಿಯರಾದ ಕೂಸಪ್ಪ ಗೌಡ, ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಉಪಾಧ್ಯಕ್ಷರಾದ ರಫೀಖ್ ಅಲಪ್ಪಾಯ,ಕೋಶಾಧಿಕಾರಿ ಬಶೀರ್ ಅಲಪ್ಪಾಯ, ಸದಸ್ಯರಾದ ಬಶೀರ್ ಕಾಪಾಯ, ಹಳೇ ವಿದ್ಯಾರ್ಥಿ ಸಂಘದ ಸದಸ್ಯರಾದ ಸುರೇಶ್ ಕುಂಟ್ಯಾಣ, ರಹಿಮಾನ್ ಅಲಪ್ಪಾಯ ಅತಿಥಿಗಳಾಗಿ ಭಾಗವಹಿಸಿದರು.

ಶಾಲಾ ಶಿಕ್ಷಕಿರಾದ ಪ್ರೀತಿಕುಮಾರಿ ,ಅಶ್ವಿನಿ,ಪವಿತ್ರ ಇತರ ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಸಂಘಟನಾ ಕಾರ್ಯದರ್ಶಿ ರಹೀಂ ಮಖ್ದೂಮಿ ಅಬೀರಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಉಪದೇಶವಿತ್ತರು. ನಂತರ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ಹಾಗೂ ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಲೇಟು ಮತ್ತು ಬರಹ ಕಡ್ಡಿಗಳನ್ನು ವಿತರಿಸಲಾಯಿತು. ಎಸ್.ಕೆ.ಎಸ್.ಎಸ್.ಎಫ್ ಶಾಖಾ ಕಾರ್ಯದರ್ಶಿ ಸಿಧ್ಧೀಖ್ ಅಲಪ್ಪಾಯ ವಂದಿಸಿದರು.

Related posts

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!