25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿ ಆಯ್ಕೆಯಾದ ಹರೀಶ್ ಪೂಂಜರವರನ್ನು ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಶಿವಾಜಿ ಫ್ರೆಂಡ್ಸ್ ಕ್ಲಬ್ ಸಂಘಟನೆಯು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿರುವ ಬಳಂಜದ ಶ್ರೇಷ್ಠ ಸಂಘಟನೆಯಲ್ಲಿ ಒಂದಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಹಾನಿಂಜ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ, ಹಿರಿಯರಾದ ಪ್ರಮೋದ್ ಕುಮಾರ್ ಜೈನ್, ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ವಿಲ್ಪ್ರೇಡ್ ಪಿಂಟೋ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ,ಗ್ರಾ.ಪಂ ಸದಸ್ಯರಾದ ಯಶೋಧರ ಶೆಟ್ಟಿ, ಯಕ್ಷಿತಾ ದೇವಾಡಿಗ, ಆಶಾ ಕಾರ್ಯಕರ್ತೆ ಮಂಗಳಾ ದೇವಾಡಿಗ, ಕ್ಲಬ್ ಕಾರ್ಯದರ್ಶಿ ಮಾಧವ ದೇವಾಡಿಗ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿವಾಜಿ ಫ್ರೆಂಡ್ಸ್ ಕ್ಲಬ್ ಪದಾಧಿಕಾರಿಗಳಾದ ಗುರುಪ್ರಸಾದ್ ಹೆಗ್ಡೆ, ಗಣೇಶ್ ದೇವಾಡಿಗ ಸಂಭ್ರಮ, ಸತೀಶ್ ಕೆ, ಈಶ್ವರ ಭಟ್, ರಾಘವೇಂದ್ರ ಭಟ್,ಯೋಗೀಶ್ ದೇವಾಡಿಗ, ಪ್ರಕಾಶ್ ದೇವಾಡಿಗ,ಯತೀಶ್ ದೇವಾಡಿಗ, ಡೀಕಯ್ಯ ಕುಲಾಲ್ ,ಆನಂದ ದೇವಾಡಿಗ ಶಾರಬೈಲು ಉಪಸ್ಥಿತರಿದ್ದರು.

ಶಿಕ್ಷಕ ಮಲ್ಲಿಕಾರ್ಜುನ ಸ್ವಾಗತಿಸಿದರು. ಹರೀಶ್ ದೇವಾಡಿಗ ಪ್ರಾಸ್ತಾವಿಕ ಮಾತನಾಡಿದರು. ಸಂತೋಷ್ ಕುಮಾರ್ ಕೆ ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya
error: Content is protected !!