30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಆವರಣವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಿಸಲು ಪ್ರತಿಜ್ಞೆ, ಮಾಡಲಾಯಿತು.

ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರಾದ ಡಾ.ಸುಬ್ರಹ್ಮಣ್ಯ ಕೆ. ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗ್ರಂಥಪಾಲಕರಾದ ಪ್ರೊ. ಜಗದೀಶ್ ಎಸ್ ಇವರು ವಿಶ್ವ ಪರಿಸರ ದಿನಾಚರಣೆಯ ಆಶಯ ಪ್ಲಾಸ್ಟಿಕ್ ಮುಕ್ತ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪರಿಸರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಎಂಬ ವಿಷಯದ ಮೇಲೆ ಭಾಷಣ ಸ್ವರ್ಧೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು, ರೋವರ್ ಸ್ಕೌಟ್ ಲೀಡರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ರವಿ ಎಂ.ಎನ್. ಪ್ರಸ್ತಾವನೆಗೈದರು. ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಹೆಚ್.ಎಸ್ ವಂದಿಸಿದರು, ಎನ್‌ಸಿಸಿ ಅಧಿಕಾರಿ ಡಾ. ಶೈಲೇಶ್ ಕುಮಾರ್ ಡಿ ಹೆಚ್ ಉಪಸ್ಥಿತರಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!