24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedತಾಲೂಕು ಸುದ್ದಿವರದಿ

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಚಾರ್ಮಾಡಿ: ಚಾರ್ಮಾಡಿ ಘಾಟ್ ಸಮೀಪದ ನಿರ್ಜನ ಪ್ರದೇಶದಲ್ಲಿ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ – ಕಾಪಿಕಾಡ್ ನಿವಾಸಿ ದಿ. ಅಬ್ಬಾಸ್ ಎಂಬವರ ಪುತ್ರ ಸವಾದ್ (35ವ) ಎಂದು ಗುರುತಿಸಲಾಗಿದೆ.

ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿದ್ದಾರೆ.

ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ.

ಘಟನಾ ಸ್ಥಳಕ್ಕೆ ಬಣಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

Related posts

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!