April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

ಲಾಯಿಲ : ಲಾಯಿಲ ಗ್ರಾಮದ ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆಯಾಗಿದೆ.

ಲಾಯಿಲದಿಂದ ಮುಂಡೂರು ಸಂಪರ್ಕಿಸುವ ಸೋಮವತಿ ನದಿ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಅಡಿ ಭಾಗದಲ್ಲಿ ಜೂ 10 ರಂದು ಮಧ್ಯಾಹ್ನ ಸ್ಥಳೀಯ ನಿವಾಸಿ ರಾಜು ಅವರು ಕಲ್ಲಿನ ಮೇಲೆ ಇರುವ ಪ್ಲಾಸ್ಟಿಕ್ ಗೋಣಿಗಳನ್ನು ಗಮನಿಸಿ ಹತ್ತಿರ ಹೋಗಿ ನೋಡಿದಾಗ ಎರಡು ಸ್ಟೀಲ್ ಡಬ್ಬಗಳು ಪತ್ತೆಯಾಗಿವೆ. ಈ ಬಗ್ಗೆ ಅವರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಅವರ ಗಮನಕ್ಕೆ ತಂದಾಗ ಅವರು ಪೊಲೀಸ್ ಅವರಿಗೆ ಮಾಹಿತಿ ನೀಡಿದ್ದಾರೆ.

ಯಾರೋ ಕಳ್ಳರು ಕಳೆದ ರಾತ್ರಿ ಎಲ್ಲಿಂದಲೂ ಕಳ್ಳತನ ಮಾಡಿ ಗೋಣಿಗಳಲ್ಲಿ ತುಂಬಿಸಿಕೊಂಡು ಬಂದು ಸೇತುವೆ ಅಡಿಯಲ್ಲಿ ಇದನ್ನು ಒಡೆದು ಹಣ ಕಳವು ಗೈದಿರುವ ಶಂಕೆ ವ್ಯಕ್ತವಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಎಎಸ್‌ಐ ದೇವಪ್ಪ, ಕ್ರೈಂ ಪಿಸಿಗಳಾದ ಚರಣ್ ರಾಜ್, ಅಶೋಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಡಬ್ಬದೊಳಗೆ ಬೀಗ ಮತ್ತು ಕೀ ಪತ್ತೆಯಾಗಿದ್ದು . ತನಿಖೆಗಾಗಿ ಎರಡು ಕಾಣಿಕೆ ಡಬ್ಬಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಕೆ ಡಬ್ಬಿಗಳು ಎಲ್ಲಿಂದ ಕಳ್ಳತನವಾಗಿದೆ ಎಂದು ಇನ್ನಷ್ಟೆ ತಿಳಿ ಬರಬೇಕಾಗಿದೆ.

Related posts

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
error: Content is protected !!