ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣದ ಅವಕಾಶವಿರುವ ಮಹತ್ವದ ” ಶಕ್ತಿ “ಯೋಜನೆಗೆ ಜೂ 11 ರಂದು ಬೆಳ್ತಂಗಡಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಣೆಯ ಮೂಲಕ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು. . ಬೆಳ್ತಂಗಡಿ ಕೆ. ಎಸ್. ಆರ್ . ಟಿ. ಸಿ ಬಸ್ ನಿಲ್ದಾಣದಿಂದ ಸಾಂಕೇತಿಕವಾಗಿ ಹೊರಟ ಬಸ್ ಗುರುವಾಯನಕೆರೆವರೆಗೆ ಹೋಗಿ ವಾಪಾಸು ಬಂತು. ಬಳಿಕ ಪುತ್ತೂರಿಗೆ ಮೊದಲ ಬಸ್ ಪ್ರಯಾಣ ಬೆಳೆಸಿದೆ. ಬಸ್ ನಲ್ಲಿ ಪ್ರಯಾಣಿಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಜೈಕಾರ ಹಾಕುತ್ತಾ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹರೀಶ ಕುಮಾರ್ ಅವರು ಕಾಂಗ್ರೆಸ್ ಪಕ್ಷ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ.ಅದರ ಬಗ್ಗೆ ಆತಂಕ ಬೇಡ ಎಂದ ಅವರು ಕಾಂಗ್ರೆಸ್ ಸರ್ಕಾರ ಬಂದ ನಂತರ ಮೊದಲ ಗ್ಯಾರಂಟಿಗೆ ಚಾಲ ನೆ ದೊರಕಿದೆ. ಈ ಸಂಬಂಧ ಎಲ್ಲಾ ಮಹಿಳೆಯರಿಗೆ, ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೂರು ತಿಂಗಳಲ್ಲಿ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಅಲ್ಲಿಯ ತನಕ ಆಧಾರ್ ಕಾರ್ಡ್ ಉಪಯೋಗಿಸಿಕೊಂಡು ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗಿಪಡಿಸಿಕೊಳ್ಳಿ. ನಾವು ಪ್ರಣಾಳಿಕೆಯಲ್ಲಿ ಹೇಳಿದ ಭರವಸೆಗಳನ್ನು ಖಂಡಿತವಾಗಿ ಈಡೇರಿಸಿ ನುಡಿದಂತೆ ನಡೆಯುತ್ತೇವೆ ಎಂದು ಹೇಳಿದರು.ಮಾಜಿ ಶಾಸಕ ವಸಂತ ಬಂಗೇರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಹಶೀಲ್ಧಾರ್ ಸುರೇಶ್ ಕುಮಾರ್ ಟಿ, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಕೆ ಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ, ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ವಿಭಾಗಾಧಿಕಾರಿ ಉದಯ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು .