September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಪುಸ್ತಕ ವಿತರಣೆ , ಪ್ರತಿಭಾ ಪುರಸ್ಕಾರ, ನಿವೃತ್ತ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ವಸಂತ ಬಂಗೇರ ಅತಿಥಿಗಳಾಗಿ ಭಾಗವಹಿಸಿದ್ದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ, ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ಅಧ್ಯಕ್ಷತೆ ವಹಿಸಿದ್ದರು.

ಕಾಯ೯ಕ್ರಮದಲ್ಲಿ ದೇಶ ಸೇವೆ ಗೈದು ನಿವೃತ್ತ ವೀರ ಯೋಧರಾದ ಉಮೇಶ್ ಮಾಲಾಡಿ ಹಾಗೂ ಉಮೇಶ್ ಬಂಗೇರನ್ನು ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಬೆಳ್ತಂಗಡಿ ವಿದ್ಯಾರ್ಥಿ ಅಭಿಷೇಕ್ ಎಂ.ವಿ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ | ಪದ್ಮಪ್ರಸಾದ್ ಅಜಿಲರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಕೆ ವಸಂತ ಬಂಗೇರ, ಸಮಾಜ ಸೇವಕ ರವಿ ಕಟಪಾಡಿ, ಅಳದಂಗಡಿ ಗ್ರಾ.ಪಂ.ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್,ಶ್ರಿ ಸತ್ಯದೇವತೆ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya
error: Content is protected !!