September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಅವರ ನೇತೃತ್ವದಲ್ಲಿ ಜೂ 11 ಆದಿತ್ಯವಾರ ನಡೆಯಿತು.

ಬೆಳಿಗ್ಗೆ 9 ಗಂಟೆಯಿಂದ ದರ್ಪಿಂಜದಿಂದ ನಿನ್ನಿಕಲ್ಲು ಹಾಗೂ ಪಡ್ಲಾಡಿ ಶಾಲೆಯ ತನಕ ಸ್ವಚ್ಛತಾ ಕಾರ್ಯ ನಡೆಯಿತು.‌

ಈ ಸಂದರ್ಭದಲ್ಲಿ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ ಮಳೆಗಾಲ ಪ್ರಾರಂಭದ ಸಮಯದಲ್ಲಿ ವಾರ್ಡಿನ‌ ಪ್ರಮುಖ ರಸ್ತೆಗಳ ಬದಿಗಳಲ್ಲಿ ಪ್ಲಾಸ್ಟಿಕ್, ಬಾಟಲಿ ಹಾಗೂ ಇತರ ತ್ಯಾಜ್ಯಗಳನ್ನು ಸ್ವಚ್ಚ ಮಾಡುವ ಮೂಲಕ ಮಾದರಿ ಕಾರ್ಯಕ್ರಮಗಳನ್ನು ಜನರ ಸಹಕಾರದಲ್ಲಿ ನಡೆಸಲಾಗುತ್ತಿದೆ. ಮಳೆ ಪ್ರಾರಂಭದ ದಿನಗಳಲ್ಲಿ ಸ್ವಚ್ಚತಾ ಕೆಲಸ ಮಾಡುತ್ತಿರುವುದರಿಂದ ಮಲೇರಿಯಾ , ಡೆಂಗ್ಯೂ, ನಂತಹ ಸಾಂಕ್ರಾಮಿಕ ರೋಗ ಹರಡುವುದು ಕಡಿಮೆಯಾಗಲಿದೆ. ಅದೇ ರೀತಿ ನಮ್ಮ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚ ವಾಗಿರಿಸಿಕೊಳ್ಳುವುದರಿಂದ ಆರೋಗ್ಯವಂತವಾಗಿರಲು ಸಾಧ್ಯ ಇದೆ.

ಈ ರೀತಿಯ ಮಾದರಿ ಕಾರ್ಯಕ್ರಮಗಳನ್ನು ಎಲ್ಲ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿದ್ದಲ್ಲಿ ಸ್ವಚ್ಛ ಪರಿಸರ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.ಅದೇ ರೀತಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಸಾಡದೇ ನಿರ್ದಿಷ್ಟ ಸ್ಥಳದಲ್ಲಿಯೇ ಕಸ ವಿಲೇವಾರಿ ಮಾಡಬೇಕು ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿ ಎಂದರು. ಎಲ್ಲ ಕೆಲಸವನ್ನು ಬದಿಗಿರಿಸಿ ಶ್ರಮದಾನದಲ್ಲಿ ಪಾಲ್ಗೊಂಡ ವಾರ್ಡಿನ ಯುವಕರಿಗೆ ಅಭಿನಂದನೆಗಳು ಮುಂದೆಯೂ ವಾರ್ಡಿನ ಇತರ ಕಡೆಗಳಲ್ಲಿಯೂ ಇದೇ ರೀತಿ ಜನರ ಸಹಕಾರದಲ್ಲಿ ಸ್ವಚ್ಚತಾ ಕಾರ್ಯ ಆಯೋಜನೆ ಮಾಡಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಸುಮಾರು 25ಕ್ಕಿಂತಲೂ ಅಧಿಕ ಸ್ಥಳೀಯ ಯುವಕರು ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya
error: Content is protected !!